An unconventional News Portal.

‘ಭ್ರಷ್ಟಾಚಾರ ನಿಗ್ರಹ ದಳ’ಕ್ಕೆ ಬೋಣಿಗೆ ಮಾಡಿದ ಸಿಎಂ ವಾಚ್ ಪ್ರಕರಣ!

‘ಭ್ರಷ್ಟಾಚಾರ ನಿಗ್ರಹ ದಳ’ಕ್ಕೆ ಬೋಣಿಗೆ ಮಾಡಿದ ಸಿಎಂ ವಾಚ್ ಪ್ರಕರಣ!

ಹಠಕ್ಕೆ ಬಿದ್ದವರಂತೆ ‘ಭ್ರಷ್ಟಾಚಾರ ನಿಗ್ರಹ ದಳ’ (ಎಸಿಬಿ) ರಚಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಮೊದಲ ಪ್ರಕರಣ ದಾಖಲಾದ ಅಚ್ಚರಿಯ ಬೆಳವಣಿಗೆ ಶನಿವಾರ ನಡೆದಿದೆ.

ವಕೀಲ ನಟರಾಜ್ ಶರ್ಮಾ ಎಂಬುವವರು ನೂತನವಾಗಿ ರಚನೆಗೊಂಡ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಸಿಎಂ ವಿವಾದಿತ ವಾಚಿನ ಕುರಿತು ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರಿಗೆ ದೂರು ನೀಡಿದ್ದಾರೆ. ಪ್ರಕರಣದ ಕುರಿತು ತನಿಖೆ ನಡೆಸುವಂತೆ ಎಸಿಬಿಯ ಬೆಂಗಳೂರು ವಿಭಾಗದ ಎಸಿಪಿ ಅಬ್ದುಲ್ ಖಾದರ್ ಅವರಿಗೆ ದೂರನ್ನು ವರ್ಗಾಯಿಸಿದ್ದಾರೆ.

“ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ 70 ಲಕ್ಷ ರೂ. ಮೌಲ್ಯದ ಹ್ಯೂಬ್ಲೋಟ್ ವಾಚ್ ಉಡುಗೊರೆ ರೂಪದಲ್ಲಿ ಬಂದಿತ್ತು. ನಿಯಮಗಳನ್ನು ಗಾಳಿಗೆ ತೂರಿ ವಾಚ್‍ನ್ನು ಮುಖ್ಯಮಂತ್ರಿಗಳು ಸ್ವೀಕರಿಸಿದ್ದಾರೆ,” ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

“ಮುಖ್ಯಮಂತ್ರಿಗಳಿಗೆ ವಾಚ್‍ನ್ನು ಉಡುಗೊರೆ ರೂಪದಲ್ಲಿ ಕೊಟ್ಟಿದ್ದು ನಾನೇ ಎಂದು ಪ್ರಮಾಣ ಪತ್ರ ಸಲ್ಲಿಸಿರುವ ದುಬೈ ಮೂಲದ ವೈದ್ಯರು, ಈವರೆಗೂ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ಪ್ರಕರಣ ಅನುಮಾನಗಳಿಗೆ ಕಾರಣವಾಗಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ದಾಖಲಿಸಿಕೊಂಡು ತನಿಖೆ ನಡೆಸಬೇಕು,” ಎಂದು ಶರ್ಮಾ ದೂರಿನಲ್ಲಿ ಕೋರಿದ್ದಾರೆ.

ಲೋಕಾಯುಕ್ತ ಪೊಲೀಸ್ ಘಟಕವನ್ನು ಸ್ಥಗಿತಗೊಳಿಸಿ ರಾಜ್ಯ ರಾಜ್ಯ ಸರಕಾರ ‘ಭ್ರಷ್ಟಾಚಾರ ನಿಗ್ರಹ ದಳ’ ರಚನೆ ಮಾಡಿತ್ತು. ಇದು ಲೋಕಾಯುಕ್ತ ಸಂಸ್ಥೆಯನ್ನೇ ಬುಡಮೇಲು ಮಾಡುವ ಹುನ್ನಾರ ಎಂದು ರಾಜ್ಯಾದ್ಯಂತ ಆಕ್ರೋಶ ವ್ಯಕ್ರವಾಗುತ್ತಿದೆ. ಆಮ್ ಆದ್ಮಿ ಪಕ್ಷ ಎಸಿಬಿಯನ್ನು ರದ್ಧು ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದೆ.

ಚಿತ್ರ: ಕನ್ನಡ ಪ್ರಭ

Leave a comment

Top