An unconventional News Portal.

ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಚಿವರ ಆಪ್ತ ಸೇರಿ ಮೂವರ ಬಂಧನ

ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಚಿವರ ಆಪ್ತ ಸೇರಿ ಮೂವರ ಬಂಧನ

ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾರ ಶಿಕ್ಷಕ ಮಂಜುನಾಥ್.

ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾರ ಶಿಕ್ಷಕ ಮಂಜುನಾಥ್.

ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರರಕಣದಲ್ಲಿ ಸಚಿವರ ಆಪ್ತ ಸಹಾಯಕ ಸೇರಿದಂತೆ ಸೋಮವಾರ ಮೂವರ ಬಂಧನವಾಗಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಡಿಐಜಿ ಸೋನಿಯಾ ನಾರಂಗ್ ಈ ಸಂಬಂಧ ಮಧ್ಯಾಹ್ನದ ವೇಳೆಗೆ ಮಾಹಿತಿ ಹೊರಗೆಡವಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಜತೆ ವಿಶೇಷಾಧಿಕಾರಿಯಾಗಿದ್ದ ಓಬಳರಾಜು ಎಂಬಾತನನ್ನು ಬಂಧಿಸಲಾಗಿದೆ.  ವಿಜಯ ನಗರದ ಕೇಂಬ್ರಿಡ್ಜ್ ಕಾಲೇಜಿನಲ್ಲಿ ದೈಹಿಕ ಶಿಕ್ಷಕ ಮಂಜುನಾಥ್ ಹಾಗೂ ಲೋಕೋಪಯೋಗಿ ಇಲಾಖೆ ಕಚೇರಿ ನಿರ್ವಾಹಕ ರುದ್ರಪ್ಪ ಉಳಿದ ಬಂಧಿತರು.

ಶಿಕ್ಷನ ಮಂಜುನಾಥ್ ಮತ್ತೊಬ್ಬ ಆರೋಪಿಯಿಂದ ಪ್ರಶ್ನೆ ಪತ್ರಿಕೆ ಪಡೆದು 10 ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾನೆ. ಈ ಹಣವನ್ನು ತನ್ನ ಬ್ಯಾಂಕ್ ಖಾತೆಯಲ್ಲಿ ಜಮಾ ಮಾಡಿದ್ದಾನೆ. ಓಬಳೇಶ್ ಹಾಗೂ ರುದ್ರಪ್ಪ ಪ್ರಶ್ನೆ ಪತ್ರಿಕೆಯನ್ನು ಹಂಚಿಕೆ ಮಾಡಿದ್ದಾರೆ ಎಂದು ಸಿಐಡಿ ಹೇಳಿಕೆ ತಿಳಿಸಿದೆ.

ಈ ಬಂಧನ ಮಾ. 21ರಂದು ಮೊದಲ ಬಾರಿಗೆ ಪ್ರಶ್ನೆ ಪತ್ರಿಕೆ ಸಂಬಂಧ ನಡೆದಿದ್ದು, ಎರಡನೇ ಬಾರಿ ಸೋರಿಕೆ ಕುರಿತು ತನಿಖೆ ಮುಂದುವರಿದಿದೆ. ಜತೆಗೆ, ಶಿಕ್ಷಕ ಮಂಜುನಾಥ್ಗೆ ಪ್ರಶ್ನೆ ಪತ್ರಿಕೆ ತಲುಪಿಸಿದ್ದು ಯಾರು ಎಂಬದನ್ನು ಇನ್ನೂ ಬಹಿರಂಗಗೊಳಿಸಿಲ್ಲ.

Top