An unconventional News Portal.

‘ಎನ್ಕೌಂಟರ್ ನಕಲಿ’: 47 ಪೊಲೀಸರಿಗೆ ಜೀವಾವಧಿ ಶಿಕ್ಷೆ

‘ಎನ್ಕೌಂಟರ್ ನಕಲಿ’: 47 ಪೊಲೀಸರಿಗೆ ಜೀವಾವಧಿ ಶಿಕ್ಷೆ

cbi spl court

25 ವರ್ಷಗಳ ಹಿಂದಿನ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ಸೋಮವಾರ ತೀರ್ಪು ಪ್ರಕಟಿಸಿರುವ ಸಿಬಿಐ ವಿಶೇಷ ನ್ಯಾಯಾಲಯ 47 ಪೊಲೀಸರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಜುಲೈ, 12, 1991ರಲ್ಲಿ ಉತ್ತರ ಪ್ರದೇಶದ ಪಿಲಿಭಿಟ್ ಎಂಬಲ್ಲಿ ಸಿಖ್ ಯಾತ್ರಾರ್ಥಿಗಳನ್ನು ದಾರಿ ನಡುವೆ ತಡೆದ ಪೊಲೀಸರು ಬಸ್ಸಿನಿಂದ ಇಳಿಸಿಕೊಂಡು ಹೋಗಿದ್ದರು. ಪ್ರಕರಣದ ಕುರಿತು ತನಿಖೆ ನಡೆಸಿದ ಸಿಬಿಐ ಸಲ್ಲಿಸಿದ ದೋಷಾರೋಪ ಪಟ್ಟಿಯ ಪ್ರಕಾರ, ಯಾತ್ರಾರ್ಥಿಗಳನ್ನು ಗುಂಪುಗಳಲ್ಲಿ ವಿಭಾಗಿಸಿ, ಕಾಡಿನಲ್ಲಿ ಗುಂಡಿಕ್ಕಿ ಕೊಂದು ಹಾಕಿದ್ದರು.ನಂತರ ಮಾಧ್ಯಮಗಳ ಮುಂದೆ, ಪ್ರಯಾಣಿಸುತ್ತಿದ್ದ ಕೆಲವು ಸಿಖ್ ಯಾತ್ರಾರ್ಥಿಗಳಲ್ಲಿ ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು. ಕೆಲವರ ಬಳಿ ಆಯುಧಗಳಿದ್ದವು ಎಂದು ಸಮರ್ಥಿಸಿಕೊಂಡಿದ್ದರು.

ಉತ್ತರ ಪ್ರದೇಶದ ತೆರೈ ಪ್ರದೇಶದಲ್ಲಿ ಶಸಸ್ತ್ರ ಚಳುವಳಿ ನಡೆಯುತ್ತಿದ್ದ 90ರ ದಶಕದಲ್ಲಿ ಈ ಪ್ರಕರಣ ಭಾರಿ ಸದ್ದು ಮಾಡಿತ್ತು. ಕೊನೆಗೆ, ಪ್ರಕರಣ ಸುಪ್ರಿಂ ಕೋರ್ಟ್ ಮೆಟ್ಟಿಲೇರಿತ್ತು. ನ್ಯಾಯಾಲಯ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಿತ್ತು.

ಸಿಬಿಐ ತನಿಖೆಯಲ್ಲಿ ಪೊಲೀಸರು ಯಾವುದೇ ಪ್ರಚೋದನೆ ಇಲ್ಲದೆ ಸಿಖ್ ಯಾತ್ರಾರ್ಥಿಗಳನ್ನು ಕೊಂದಿರುವುದು ಕಂಡು ಬಂದಿತ್ತು. ಇಡೀ ಕಾರ್ಯಾಚರಣೆಯಲ್ಲಿ ಒಟ್ಟು 47 ಪೊಲೀಸರು ಪಾಲ್ಗೊಂಡಿದ್ದರು. ಇದರಲ್ಲಿ 10 ಜನ ಈಗಾಗಲೇ ಮೃತಪಟ್ಟಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ೇ. 1ರಂದು ನಕಲಿ ಎನ್ಕೌಂಟರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪೊಲೀಸರು ತಪ್ಪಿತಸ್ಥರು ಎಂದು ಘೋಷಿಸಿತ್ತು. ಸೋಮವಾರ ಶಿಕ್ಷೆ ಪ್ರಮಾಣವನ್ನು ಪ್ರಕರಟಿಸಿದ ನ್ಯಾಯಾಲಯ 47 ಪೊಲೀಸರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

 

Top