An unconventional News Portal.

ಸೋನಿಯಾ ಬಂಧಿಸಿ: ಬಿಜೆಪಿಗೆ ಕೇಜ್ರಿವಾಲ್ ಸವಾಲು

ಸೋನಿಯಾ ಬಂಧಿಸಿ: ಬಿಜೆಪಿಗೆ ಕೇಜ್ರಿವಾಲ್ ಸವಾಲು

ಆಗಸ್ಟಾ ವೆಸ್ಟ್‍ಲ್ಯಾಂಡ್ ಹಗರಣಕ್ಕೆ ಸಂಬಂಧಪಟ್ಟಂತೆ ಆರೋಪಕ್ಕೆ ಗುರಿಯಾಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಇತರ ನಾಯಕರನ್ನು ಬಂಧಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಿಜೆಪಿಗೆ ಸವಾಲು ಹಾಕಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೌನ ಕಾಯ್ದುಕೊಂಡಿರುವುದನ್ನು ಪ್ರಶ್ನಿಸಿರುವ ಅವರು ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ  ಕಾಂಗ್ರೆಸ್ ನಾಯಕರ ಕಚೇರಿ ಹಾಗೂ ಮನೆಗಳ ಮೇಲೆ ಯಾಕಿನ್ನೂ ದಾಳಿ ನಡೆಸಿಲ್ಲ ಎಂದು ಪ್ರಶ್ನಿಸಿದ್ದಾರೆ.

‘ಪ್ರಕರಣದಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಇತರ ನಾಯಕರನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಎಂದು ಪಿಟಿಐಗೆ ನೀಡಿದ ಹೇಳಿಕೆಯಲ್ಲಿ ಸವಾಲು ಹಾಕಿದ್ದಾರೆ. ಅದನ್ನು ಅವರು ಗುರುವಾರ ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ.

“ಬಿಜೆಪಿ ಹಗರಣದ ತನಿಖೆಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾರದು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬಲವಾದ ಸಂಬಂಧವಿದೆ,” ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

“ಆಗಸ್ತಾ ವೆಸ್ಟ್ ಲ್ಯಾಂಡ್ ಡೀಲ್ನಲ್ಲಿ ನಾನು ಭಾಗಿಯಾಗಿದ್ದರೆ ಕೇವಲ ಅರ್ಧ ಗಂಟೆಯಲ್ಲಿ ಬಂಧಿಸುತ್ತಿದ್ದರು. ಸೋನಿಯಾ ಗಾಂಧಿಯವರ ಜಾಗದಲ್ಲಿ ನಾನಿದ್ದಿದ್ದರೆ ಸಿಬಿಐ, ಪೊಲೀಸರು, ಈಡಿ ಸೇರಿದಂತೆ ಎಲ್ಲಾ ಏಜೆನ್ಸಿಗಳು ಮನೆ ಮುಂದೆ ಇರುತ್ತಿದ್ದರು,” ಎಂದವರು ಮಾರ್ಮಿಕವಾಗಿ ನುಡಿದಿದ್ದಾರೆ.

Leave a comment

FOOT PRINT

Top