An unconventional News Portal.

ಇಂದಿನಿಂದ ಸಿಇಟಿ ಪರೀಕ್ಷೆ: ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ

ಇಂದಿನಿಂದ ಸಿಇಟಿ ಪರೀಕ್ಷೆ: ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ

ಹಲವು ಗೊಂದಲಗಳ ನಡುವೆಯೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬುಧವಾರ (ಇಂದು)ದಿಂದ ಆರಂಭವಾಗಲಿದೆ.

ಸುಮಾರು 1,78,346 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯಾದ್ಯಂತ 391 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಬೆಂಗಳೂರಿನಲ್ಲಿ 82 ಕೇಂದ್ರಗಳಲ್ಲಿ 42,963 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದಾರೆ. ಗಡಿನಾಡು ಮತ್ತು ಹೊರನಾಡು ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಮೇ 6ರಂದು ನಡೆಯಲಿದ್ದು, 2,560 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.

ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವ ಸಂಬಂಧ ಇಲ್ಲಾ ವಿಧವಾದ ಸಿದ್ಧತೆ, ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕಾರ್ಯಗಳಿಗಾಗಿ ಒಟ್ಟು 391 ವೀಕ್ಷಕರು, 782 ವಿಶೇಷ ಜಾಗೃತ ದಳ ಸದಸ್ಯರು, 391 ಪ್ರಶ್ನೆಪತ್ರಿಕಾ ಪಾಲಕರು, ಸುಮಾರು 11,170 ಕೊಠಡಿ ಮೇಲ್ವಿಚಾರಕರು ಹಾಗೂ 19,000ಕ್ಕೂ ಹೆಚ್ಚು ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಬೆಂಗಳೂರಿನಲ್ಲಿ 82 ಕೇಂದ್ರಗಳನ್ನು ತೆರೆಯಲಾಗಿದ್ದು, 42,969 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಉಳಿದ 1,35,177 ಅಭ್ಯರ್ಥಿಗಳು ರಾಜ್ಯದ ವಿವಿಧೆಡೆ ಪರೀಕ್ಷೆ ಬರೆಯಲಿದ್ದಾರೆ. ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಮೇ 6ರಂದು ಬೆಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸುತ್ತಿದ್ದು, ಒಟ್ಟು 2,560 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ.

ಅಭ್ಯರ್ಥಿಗಳು ಪರೀಕ್ಷಾ ದಿನಗಳಂದು ಪ್ರವೇಶ ಪತ್ರದ ಜೊತೆಯಲ್ಲಿ ಕಡ್ಡಾಯವಾಗಿ ಯಾವುದಾದರೂ ಒಂದು ಮಾನ್ಯತೆಯುಳ್ಳ ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಪಿಯುಸಿ ಪರೀಕ್ಷಾ ಪ್ರವೇಶಪತ್ರ, ಬಸ್‍ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್ ಪೋರ್ಟ್, ಆಧಾರ್ ಕಾರ್ಡ್ ಇತ್ಯಾದಿ) ತೆಗೆದುಕೊಂಡು ಹೋಗಬೇಕು.

ಪರೀಕ್ಷೆ ಆರಂಭವಾಗುವ ಅರ್ಧಗಂಟೆ ಮೊದಲೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಇರಬೇಕು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು ಅಥವಾ ತೆಗೆದುಕೊಂಡು ಹೋಗುವಂತಿಲ್ಲ. ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಗೋಡೆ ಗಡಿಯಾರದ ವ್ಯವಸ್ಥೆ ಮಾಡಲಾಗಿದೆ.

ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಪೋನ್, ಬ್ಲೂಟೂತ್, ಸ್ಲೈಡ್ ರೂಲ್ಸ್, ಕ್ಯಾಲ್ ಕ್ಯುಲೇಟರ್, ವೈಟ್ ಫ್ಲೂಯಿಡ್, ವೈರ್‍ಲೆಸ್ ಸೆಟ್ಸ್, ಪುಸ್ತಕ ಇತ್ಯಾದಿಯನ್ನು ಪರೀಕ್ಷಾ ಕೊಠಡಿಗೆ ತರುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a comment

FOOT PRINT

Top