An unconventional News Portal.

  ...

  ಮಗನ ನೋಡಲು ಬೆಲ್ಜಿಯಂ ತಲುಪಿದ ಸಿಎಂ

  ಸಿಎಂ ಪುತ್ರ ರಾಕೇಶ್ ಸಿದ್ದರಾಮಯ್ಯ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. ಗುರುವಾರ ಮುಂಜಾನೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಸಿಎಂ ಸಿದ್ದರಾಮಯ್ಯ ಬೆಲ್ಜಿಯಂನ ಬ್ರುಸೆಲ್ಸ್ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ. ಅಲ್ಲಿಂದ ಭಾರತದ ರಾಯಭಾರಿ ಮಂಜೀವ್ ಪುರಿ ನೇರವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಂಟ್ವ್ರೆಪ್ ವಿಶ್ವವಿದ್ಯಾನಿಲಯದ ಆಸ್ಪತ್ರೆಯಲ್ಲಿ ಮಗನನ್ನು ನೋಡಿದ ಸಿದ್ದರಾಮಯ್ಯ ಅಲ್ಲಿಯೇ ಇದ್ದ ಕುಟುಂಬ ವರ್ಗದವರನ್ನು ಭೇಟಿ ಮಾಡಿದ್ದಾರೆ ಎಂದು ಪ್ರಕಟಣೆ ಹೇಳಿದೆ. ‘ಅಕ್ಯೂಟ್ ಪ್ಯಾಂಕ್ರಿಯಾಟೈಟಿಸ್’ ಕಾಯಿಲೆಯಿಂದ ಬಳಲುತ್ತಿರುವ ರಾಕೇಶ್ ಸಿದ್ದರಾಮಯ್ಯ ಬೆಲ್ಜಿಯಂ […]

  July 28, 2016
  ...

  ‘ಮಹದಾಯಿ ವಿವಾದ’: ಕರ್ನಾಟಕದ ಮಧ್ಯಂತರ ಅರ್ಜಿ ಸಲ್ಲಿಕೆಗೆ ವಿರೋಧ ವ್ಯಕ್ತಪಡಿಸಿದ್ದರಾ ನಾರಿಮನ್?

  ಮಹದಾಯಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ನ್ಯಾಯಾಧಿಕರಣದಲ್ಲಿ ಅರ್ಜಿ ಸಲ್ಲಿಸುವಲ್ಲೇ ಎಡವಟ್ಟು ಮಾಡಿಕೊಂಡಿತಾ ಎಂಬ ಪ್ರಶ್ನೆ ಇದೀಗ ಚರ್ಚೆಗೆ ಬಂದಿದೆ. ನ್ಯಾಯಾಧಿರಣದ ಮುಂದೆ ಮಧ್ಯಂತರ ಅರ್ಜಿ ಸಲ್ಲಿಸಲು ಸ್ವತಃ ಕರ್ನಾಟಕ ಪರ ವಕೀಲ ನಾರಿಮನ್ ವಿರೋಧ ವ್ಯಕ್ತ ಪಡಿಸಿದ್ದರು ಎಂಬ ಮಾಹಿತಿ ಮುಖ್ಯಮಂತ್ರಿ ಕಚೇರಿ ಮೂಲಗಳಿಂದ ತಿಳಿದು ಬಂದಿದೆ. ತಾನಾಗಿಯೇ ಅರ್ಜಿ ಸಲ್ಲಿಸಿ, ತಿರಸ್ಕೃತಗೊಂಡು,  ಅನಗತ್ಯ ವಿವಾದವೊಂದನ್ನು ಕರ್ನಾಟಕ ಸರಕಾರ ಮೈಮೇಲೆ ಎಳೆದುಕೊಂಡಂತಾಗಿದೆ ಪರಿಸ್ಥಿತಿ. ಉತ್ತರ ಕರ್ನಾಟಕ ಉದ್ವಿಗ್ನವಾಗಲು ಪ್ರಮುಖ ಕಾರಣವಾಗಿದೆ. ಹಿನ್ನೆಲೆ:  ಕರ್ನಾಟಕ ಮತ್ತು ಗೋವಾ ಜಲವಿವಾದ ನ್ಯಾಯಾಧಿಕರಣದಲ್ಲಿದ್ದಾಗಲೇ, […]

  July 28, 2016
  ...

  ‘ಕಳಸಾ-ಬಂಡೂರಿ’: ಕಿಚ್ಚು ಹೊತ್ತಿಸಿದ ಮಹದಾಯಿ ‘ಮಧ್ಯಂತರ’ ತೀರ್ಪು; ಏನಿದು ವಿವಾದ?

  ಮಹದಾಯಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ತೀರ್ಪು ಬುಧವಾರ ಪ್ರಕಟಗೊಂಡಿದ್ದು ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿದೆ. ಮಹದಾಯಿ ನ್ಯಾಯಾಧಿಕರಣದಲ್ಲಿ ಕರ್ನಾಟಕದ ಅರ್ಜಿ ತಿರಸ್ಕೃತವಾಗುತ್ತಿದ್ದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಪ್ರತಿಭಟನೆಗಳು ಹುಟ್ಟಿಕೊಂಡಿವೆ. ಕರ್ನಾಟಕದ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡಿದ ನ್ಯಾ. ಜೆ. ಎಂ. ಪಾಂಚಾಲ್ ಅಧ್ಯಕ್ಷತೆಯ ನ್ಯಾಯಾಧಿಕರಣ 7.65 ಟಿಎಂಸಿ ಅಡಿ ಕುಡಿಯುವ ನೀರು ಬಳಕೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ನ್ಯಾಯಾಧಿಕರಣದ ಈ ತೀರ್ಪಿನಿಂದ ಕರ್ನಾಟಕಕ್ಕೆ ಮಧ್ಯಂತರ ಹಿನ್ನಡೆಯುಂಟಾಗಿದೆ. […]

  July 28, 2016

Top