An unconventional News Portal.

RIP ರಾಕೇಶ್ ಸಿದ್ದರಾಮಯ್ಯ: ಸಿಎಂ ಪ್ರೀತಿಯ ಪುತ್ರ ಇನ್ನಿಲ್ಲ

RIP ರಾಕೇಶ್ ಸಿದ್ದರಾಮಯ್ಯ: ಸಿಎಂ ಪ್ರೀತಿಯ ಪುತ್ರ ಇನ್ನಿಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ರಾಕೇಶ್ ಸಿದ್ಧರಾಮಯ್ಯ ಶನಿವಾರ ಬೆಲ್ಜಿಯಂನ ಬ್ರಸೆಲ್ಸ್ ನಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾಯಿಲೆಯಿಂದ ಬಳಲುತ್ತಿದ್ದ ಅವರು ಆಂಟ್ವ್ರೆಪ್ ವಿಶ್ವವಿದ್ಯಾನಿಲಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಸ್ನೇಹಿತರ ಜೊತೆ ವಿದೇಶ ಪ್ರವಾಸಕ್ಕೆ ತೆರಳಿದ್ದ ರಾಕೇಶ್ ಅನಾರೋಗ್ಯಕ್ಕೆ ತುತ್ತಾಗಿದ್ದರು. ಶನಿವಾರ ರಾತ್ರಿ ಸಿದ್ದರಾಮಯ್ಯನವರಿಗೆ ಮಗ ಅನಾರೋಗ್ಯಕ್ಕೆ ತುತ್ತಾಗಿರುವ ವಿಚಾರ ಬಹಿರಂಗವಾಗಿತ್ತು. ಭಾನುವಾರ ಸಂಜೆ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿತ್ತು. ಗುರುವಾರ ಬೆಳಿಗ್ಗೆ ಸಿಎಂ ಬೆಲ್ಜಿಯಂಗೆ ತೆರಳಿದ್ದರು.

ರಾಕೇಶ್ ಸಿದ್ದರಾಮಯ್ಯ ‘ಅಕ್ಯೂಟ್ ಪ್ಯಾಂಕ್ರಿಯಾಟೈಟಿಸ್’ ಕಾಯಿಲೆಯಿಂದ ಬಳಲುತ್ತಿದ್ದರು. 14 ವರ್ಷದ ಹಿಂದೆ ನಡೆದ ಅಪಘಾತವೊಂದರಲ್ಲಿ ರಾಕೇಶ್ ಸಿದ್ಧರಾಮಯ್ಯ ಏಟು ಮಾಡಿಕೊಂಡಿದ್ದರು. ಇದು ಪದೇ ಪದೇ ಸಮಸ್ಯೆ ತಂದೊಡ್ಡುತ್ತಿತ್ತು ಎಂದು ಅವರ ಗೆಳೆಯರು ತಿಳಿಸಿದ್ದಾರೆ.

ಬೆಲ್ಜಿಯಂ ಪ್ರವಾಸದ ವೇಳೆ ಅನಾರೋಗ್ಯಕ್ಕೆ ಈಡಾಗುತ್ತಿದ್ದಂತೆ ಅಲ್ಲಿನ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಿದ್ದಂತೆ ಉತ್ತಮ ಗುಣಮಟ್ಟದ ಆಂಟ್ವ್ರೆಪ್ ವಿಶ್ವವಿದ್ಯಾನಿಲಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಒಂದು ಹಂತದಲ್ಲಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿತ್ತು.

ಆದರೆ ಶನಿವಾರ ಮಧ್ಯಾಹ್ನದ ವೇಳೆಗೆ ಬ್ರಸೆಲ್ಸ್ ಯೂನಿವರ್ಸಿಟಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಕೇಶ್ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.

ಮುಖ್ಯಮಂತ್ರಿ ಮಗ ರಾಕೇಶ್ಗೆ ಇಬ್ಬರು ಪುಟ್ಟ ಮಕ್ಕಳಿದ್ದು ಮಗ ಜರ್ಮನಿಯಲ್ಲಿ ಓದುತ್ತಿದ್ದರೆ, ಮಗಳು ಬೆಂಗಳೂರಿನಲ್ಲಿ ಓದುತ್ತಿದ್ದಾಳೆ.

ಗುರುವಾರ ಬೆಳಿಗ್ಗೆ ಬೆಂಗಳೂರು ಬಿಟ್ಟ ಮುಖ್ಯಮಂತ್ರಿ ಸಿದ್ಧರಾಮಯ್ಯ ಶನಿವಾರ ವಾಪಸ್ಸು ಬರುವುದು ನಿಗದಿಯಾಗಿತ್ತು. ಆದರೆ ಈಗ ಮಗನ ಶವದೊಂದಿಗೆ ಮರಳಬೇಕಾಗಿ ಬಂದಿರುವುದು ವಿಪರ್ಯಾಸ.

ಗಣ್ಯರ ಕಂಬನಿ

ಸಿಎಂ ಸಿದ್ಧರಾಮಯ್ಯ ಪುತ್ರ ರಾಕೇಶ್ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು ದೇವರು ಮಗನನ್ನು ಕಳೆದುಕೊಂಡ ನೋವನ್ನು ಭರಿಸುವ ಶಕ್ತಿಯನ್ನು ಸಿದ್ಧರಾಮಯ್ಯ ಮತ್ತು ಅವರ ಕುಟುಂಬಕ್ಕೆ ನೀಡಲಿ ಎಂದು ಬೇಡಿಕೊಂಡಿದ್ದಾರೆ.

Modi

ಮಾಜಿ ಮುಖ್ಯಮಂತ್ರಿ ಕರ್ನಾಟಕ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರೂ ಕುರಿತು ಟ್ವೀಟ್ ಮಾಡಿದ್ದಾರೆ. ಹಲವು ನಾಯಕರು ಮಾಧ್ಯಮಗಳಿಗೆ ಪ್ರತಿಕ್ರೀಯೆ ನೀಡಿದ್ದು ಸಾವಿನ ದುಖಃ ತಡೆದುಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಮತ್ತು ಕುಟುಂಬದವರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

 

RIP

RIP2

 

Leave a comment

FOOT PRINT

Top