An unconventional News Portal.

    ...
    Bhatia-1
    ಫೋಕಸ್

    ಕೇಂಬ್ರಿಡ್ಜ್ ರಿಟರ್ನ್ ಮಿಸ್ ಭಾಟಿಯಾ ಮತ್ತು ಸಂಘರ್ಷದ ನಾಡಿನ ಕೊಲೆ ಬೆದರಿಕೆಗಳು

    ಸದ್ಯ ದೇಶದ ರಾಜಧಾನಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಹೋರಾಟಕ್ಕೆ ಇಳಿದಿದ್ದಾರೆ. ಹಕ್ಕುಗಳಿಗಾಗಿ ಹೋರಾಟ ನಡೆಸಿಕೊಂಡು ಬರುವ ಸಂಪ್ರದಾಯ ಭಾರತಕ್ಕೆ ಹೊಸತಲ್ಲ. ಹಾಗಂತ ಹೋರಾಟ ಎಂಬುದು ಸುಂದರ ಗುಲಾಬಿಗಳನ್ನು ಹೊಂದಿರುವ ತೋಟವೇನೂ ಅಲ್ಲ. ಅದರಲ್ಲೂ, ಬಸ್ತಾರ್‌ನಂತಹ ಸೇನಾಪಡೆ ಮತ್ತು ನಕ್ಸಲೀಯರ ನಡುವೆ ನಿರಂತರ ಕಾಳಗಕ್ಕೆ ಸಾಕ್ಷಿಯಾಗಿರುವ ಪ್ರದೇಶದಲ್ಲಿ ಮಾನವ ಹಕ್ಕುಗಳಿಗಾಗಿ ಹೋರಾಟ ನಡೆಸುವುದು ಇನ್ನೂ ಕಷ್ಟ. ಅಂತಹದೊಂದು ಕಷ್ಟವನ್ನು ಮೈಮೇಲೆ ಎಳೆದುಕೊಂಡವರು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ ಪಡೆದುಕೊಂಡು ಬಂದಿರುವ ಮಿಸ್. ಭಾಟಿಯಾ. ಆದಿವಾಸಿಗಳಿರುವ ಛತ್ತೀಸ್‌ಗಢ ರಾಜ್ಯದ ಪರ್ಪಾ ಗ್ರಾಮದಲ್ಲಿ ಭಾಟಿಯಾ..

    February 28, 2017
    ...
    DU-Protest-1
    ದೇಶ

    ದೇಶ ಕಂಡ ವಿದ್ಯಾರ್ಥಿ ಚಳವಳಿಗಳು: ‘ನವ ನಿರ್ಮಾಣ’ದಿಂದ ಸೈದ್ಧಾಂತಿಕ ಸಂಘರ್ಷದವರೆಗೆ

    ದಿಲ್ಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಗುರುವಾರ ಭಾರಿ ಸಂಖ್ಯೆಯಲ್ಲಿ ಬೀದಿಗೆ ಇಳಿಯುವ ಮೂಲಕ ದೇಶದ ರಾಜಧಾನಿಯ ‘ಕ್ಯಾಂಪಸ್ ಹೋರಾಟ’ದ ನಿರಂತರತೆಯನ್ನು ಕಾಯ್ದುಕೊಂಡಿದ್ದಾರೆ. ಕಳೆದ ವಾರ ಇದೇ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ ಶ್ರೀ ರಾಮ್‌ ಕಾಲೇಜಿನ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ‘ರಣರಂಗ’ವನ್ನು ನಿರ್ಮಿಸಿದ್ದರು. ಜವಹರ್‌ಲಾಲ್ ನೆಹರೂ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ನಾಯಕರನ್ನು ಕಾರ್ಯಕ್ರಮಕ್ಕೆ ಅಹ್ವಾನಿಸಿದ್ದನ್ನು ಇವರು ವಿರೋಧಿಸಲು ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ, ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಪಕರ ಮೇಲೆ ಹಲ್ಲೆ..

    February 28, 2017

Top