An unconventional News Portal.

  ...

  ‘ಬ್ಲಾಕ್‌ಮೇಲ್’ ಬೆನ್ನಲ್ಲೇ ಅನುಮಾನ ಮೂಡಿಸಿದ ಜನಶ್ರೀ ಅಕೌಂಟೆಂಟ್ ಸಾವಿನ ಪ್ರಕರಣ

  ಜನಶ್ರೀ ಸುದ್ದಿ ವಾಹಿನಿಯ ‘ಬ್ಲಾಕ್‌ ಮೇಲ್’ ಪ್ರಕರಣ ಹೊರಬಿದ್ದ ಬೆನ್ನಲ್ಲೇ, ಅದರ ಅಕೌಂಟೆಂಟ್ ಒಬ್ಬರ ಸಾವಿನ ಸುತ್ತ ಈತ ದಟ್ಟ ಅನುಮಾನ ಹೊಗೆಯಾಡುತ್ತಿದೆ. ವಾಹಿನಿಯಲ್ಲಿ ಸುಮಾರು ನಾಲ್ಕು ವರ್ಷಗಳಿಂದ ಅಕೌಂಟೆಂಟ್ ಆಗಿದ್ದ ಕಾರ್ತಿಕ ಲಾರೆನ್ಸ್‌ ಕಳೆದ ಗುರುವಾರ ಬ್ಯಾಪ್ಟಿಸ್ಟ್‌ ಆಸ್ಪತ್ರೆಯ ಐಸಿಯುನಲ್ಲಿ ಸಾವನ್ನಪ್ಪಿದ್ದರು. ಸದ್ಯ ಪ್ರಕರಣ ಹೆಬ್ಬಾಳ ಟ್ರಾಫಿಕ್ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದು, ಮರಣೊತ್ತರ ಪರೀಕ್ಷೆಯ ವರದಿಯ ನಿರೀಕ್ಷೆಯಲ್ಲಿ ಪೊಲೀಸರಿದ್ದಾರೆ. ಆದರೆ ಕಾರ್ತಿಕ್ ಸಾವಿನ ಹಿನ್ನೆಲೆಯನ್ನು ಗಮನಿಸಿದರೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಡುವ ಅಂಶಗಳು ಬೆಳಕಿಗೆ ಬರುತ್ತವೆ. ಏನಿದು ಪ್ರಕರಣ?: […]

  April 17, 2017
  ...

  ಪ್ರಧಾನಿ ಮೋದಿಯ 8ನೇ ಭೇಟಿ: ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಸಿಕ್ಕ ‘ರಾಷ್ಟ್ರೀಯ ಪ್ರಚಾರ’

  ಈ ವರ್ಷದ ಕೊನೆಯಲ್ಲಿ ಗುಜರಾತ್‌ ಚುನಾವಣೆ ದೇಶದ ಗಮನ ಸೆಳೆಯುವ ಸಾಧ್ಯತೆಗಳು ನಿಚ್ಚಳವಾಗಿವೆ. ಭಾನುವಾರ ಭುವನೇಶ್ವರದಲ್ಲಿ ನಡೆದ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಣಿಯನ್ನು ಮುಗಿಸಿದ ಪ್ರಧಾನಿ ಮೋದಿ, ನೇರವಾಗಿ ಸೂರತ್‌ಗೆ ಕಾಲಿಟ್ಟಿದ್ದಾರೆ. ಇಂದೂ ಕೂಡ ಗುಜರಾತ್‌ನಲ್ಲಿ ಹಲವು ಸರಕಾರಿ ಯೋಜನೆಗಳಿಗೆ ಶಿಲಾನ್ಯಾಸ ಮಾಡಲಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಮುಂಬರುವ ಗುಜರಾತ್‌ ವಿಧಾನಸಭಾ ಚುನಾವಣೆಯನ್ನು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಕೊಂಚ ಸೀರಿಯಸ್‌ ಆಗಿಯೇ ತೆಗೆದುಕೊಂಡಿದೆ ಎಂಬುದರ ಮುನ್ಸೂಚನೆಯನ್ನು ನೀಡುತ್ತಿವೆ. ಭಾನುವಾರ ಪ್ರೈಂ ಶೋ: ರಜಾ ದಿನವಾದ ಭಾನುವಾರ ಸಂಜೆ […]

  April 17, 2017

Top