An unconventional News Portal.

ಹಳೇ ದೋಸ್ತಿಗಳ ಹೊಸ ಮೈತ್ರಿ: ಅತಂತ್ರ ಸ್ಥಳೀಯ ಸಂಸ್ಥೆಗಳ ಅಧಿಕಾರ ಖಾತ್ರಿ!

ಹಳೇ ದೋಸ್ತಿಗಳ ಹೊಸ ಮೈತ್ರಿ: ಅತಂತ್ರ ಸ್ಥಳೀಯ ಸಂಸ್ಥೆಗಳ ಅಧಿಕಾರ ಖಾತ್ರಿ!

bjp_jds_local_bodiesಹಳೇ ದೋಸ್ತಿಗಳು ಮತ್ತೊಂದು ಸುತ್ತಿನ ಮೈತ್ರಿಗೆ ಮುಂದಾಗುತ್ತಿದ್ದಾರೆ.

ಅತಂತ್ರ ಸ್ಥಿತಿಯಲ್ಲಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹೊಂದಾಣಿಕೆ ಮಾಡಿಕೊಳ್ಳಲಿವೆ. ಇದಕ್ಕಾಗಿ ಬಿಜೆಪಿ ಮುಖಂಡರ ರಹಸ್ಯ ಸಭೆಯೊಂದು ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಜತೆ ಔಪಚಾರಿಕ ಮಾತುಕತೆಯ ಹೊಣೆಯನ್ನು ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ವಹಿಸಲಾಗಿದೆ.

ಸ್ಥಳೀಯ ಸಂಸ್ಥೆಗಳ ಫಲಿತಾಂಶ ಬಂದ ನಂತರ, ಸ್ಥಳೀಯ ನಾಯಕರ ವಿವೇಚನೆಗೆ ಹೊಂದಾಣಿಕೆ ವಿಚಾರವನ್ನು ಬಿಡಲಾಗಿತ್ತು. ಆದರೆ, ಕಳೆದ ಕೆಲವು ದಿನಗಳ ಬೆಳವಣಿಗೆಯಲ್ಲಿ ಬಿಜೆಪಿಯ ರಾಜ್ಯ ಮಟ್ಟದ ನಾಯಕರು ಸ್ಥಳೀಯ ಸಂಸ್ಥೆಗಳಲ್ಲಿ ಜೆಡಿಎಸ್ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಕುರಿತು ಉತ್ಸುಕತೆ ತೋರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ರಹಸ್ಯ ಸಭೆ ನಡೆದಿದೆ. ಇಲ್ಲಿ, ಆಡಳಿತ ಪಕ್ಷ ಕಾಂಗ್ರೆಸ್ಗೆ ಪರ್ಯಾಯವಾಗಿ ಉಬಯ ಪಕ್ಷಗಳು ಹೊಂದಾಣಿಕೆ ಮಾಡಿಕೊಳ್ಳುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ. ಇದು ಮುಂದಿನ ವಿಧಾನಸಭೆ ಚುನಾವಣೆಯ ಮೈತ್ರಿ ಸಾಧ್ಯತೆಗೂ ಪೂರಕ ವಾತಾವರಣ ಸೃಷ್ಟಿಸುವ ತಯಾರಿ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಆಯಾ ಸ್ಥಳೀಯ ಸಂಸ್ಥೆಗಳಲ್ಲಿ ಅತಿ ಹೆಚ್ಚು ಸ್ಥಾನ ಪಡೆದಿರುವವರಿಗೆ ಅಧ್ಯಕ್ಷ ಸ್ಥಾನ ಹಾಗೂ ಎರಡನೇ ಸ್ಥಾನ ಪಡೆದವರೆ ಉಪಾಧ್ಯಕ್ಷ ಸ್ಥಾನ, ಉಳಿದವರಿಗೆ ಸ್ಥಾಯಿ ಸಮಿತಿಗಳಲ್ಲಿ ಅಧಿಕಾರ ನೀಡುವ ಒಪ್ಪಂದವನ್ನು ಉಭಯ ಪಕ್ಷಗಳು ಮಾಡಿಕೊಳ್ಳಲಿವೆ ಎನ್ನಲಾಗಿದೆ. ಮೈಸೂರಿನಲ್ಲಿ ಜೆಡಿಎಸ್‍ಗೆ ಅಧ್ಯಕ್ಷ ಸ್ಥಾನ ನೀಡಿದರೆ, ಉಪಾಧ್ಯಕ್ಷ ಸ್ಥಾನ ಬಿಜೆಪಿಗೆ ಸಿಗಲಿದೆ. ತುಮಕೂರಿನಲ್ಲಿ ಜೆಡಿಎಸ್ ತನಗೆ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟಿದೆ. ಆದರೆ, ಬಿಜೆಪಿ ಇಲ್ಲಿ ಹೆಚ್ಚಿನ ಸ್ಥಾನಗಳಿಸಿರುವುದರಿಂದ ತನಗೆ ಅಧ್ಯಕ್ಷ ಸ್ಥಾನ ನೀಡುವಂತೆ ಪಟ್ಟು ನೀಡಿದೆ. ಉಳಿದಂತೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿರುವ ಶಿವಮೊಗ್ಗ, ರಾಯಚೂರು, ಕೊಪ್ಪಳ, ಧಾರವಾಡ, ಬೆಂಗಳೂರು ನಗರ, ವಿಜಯಪುರ ಜಿಲ್ಲೆಗಳಲ್ಲಿ ಬಿಜೆಪಿಗೆ ಅಧ್ಯಕ್ಷ ಸ್ಥಾನ ಹಾಗೂ ಜೆಡಿಎಸ್ ಉಪಾಧ್ಯಕ್ಷ ಸ್ಥಾನ ದೊರಕಲಿದೆ. ಇದೇ ಸೂತ್ರ ಅತಂತ್ರಗೊಂಡಿರುವ 60 ತಾಲೂಕು ಪಂಚಾಯ್ತಿಗಳಿಗೂ ಅನ್ವಯವಾಗಲಿದೆ.

ಇತ್ತೀಚೆಗೆ ನಡೆದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳಲ್ಲಿ ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಬೆಂಗಳೂರು ಗ್ರಾಮಾಂತರ, ಗದಗ, ಹಾವೇರಿ, ಬೀದರ್, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಾಂಗ್ರೆಸ್ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿತ್ತು. ಇನ್ನು ಕೊಡಗು, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಬಳ್ಳಾರಿ, ಕಲಬುರಗಿ ಜಿಲ್ಲೆಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿತ್ತು. ಹಾಸನ ಮತ್ತು ಮಂಡ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದಿದ್ದರೆ, 11 ಜಿಲ್ಲಾ ಪಂಚಾಯ್ತಿಗಳು ಅತಂತ್ರವಾಗಿದ್ದವು. ಕೋಲಾರ, ಚಿಕ್ಕಬಳ್ಳಾಪುರ, ಯಾದಗಿರಿ, ಜಿಲ್ಲೆಗಳಲ್ಲಿ ಪಕ್ಷೇತರ ಬೆಂಬಲದಿಂದ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.

ಈ ಬದಲಾವಣೆಯಿಂದ ಯಾರಿಗೆ ಲಾಭ- ಯಾರಿಗೆ ನಷ್ಟ ಎಂಬುದಕ್ಕಿಂತ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್. ಡಿ. ದೇವೇಗೌಡ ಅವರ ಅಂತಿಮ ಇಶಾರೆಯ ಮೇಲೆ ಎಲ್ಲವೂ ನಿಂತಿದೆ.

ENTER YOUR E-MAIL

Name
Email *
March 2017
M T W T F S S
« Feb    
 12345
6789101112
13141516171819
20212223242526
2728293031  

Top