An unconventional News Portal.

ವಿದ್ವತ್ತು, ಆಡಳಿತ ಮತ್ತು ಚಳವಳಿ ಮೂಲಕ ಕನ್ನಡ ಕಟ್ಟಿದ ಸಾಹಿತಿ ಇನ್ನಿಲ್ಲ

ವಿದ್ವತ್ತು, ಆಡಳಿತ ಮತ್ತು ಚಳವಳಿ ಮೂಲಕ ಕನ್ನಡ ಕಟ್ಟಿದ ಸಾಹಿತಿ ಇನ್ನಿಲ್ಲ

ಹಿರಿಯ ಸಾಹಿತಿ, ಕುವೆಂಪು ಶಿಷ್ಯ ದೇ. ಜವರೇಗೌಡ ಅನಾರೋಗ್ಯದ ಕಾರಣ ಸೋಮವಾರ ಸಂಜೆ ಮೈಸೂರಿನಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು.

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದೇಜಗೌ ಅವರನ್ನು ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು.

1918ರ ಜುಲೈ 8ರಂದು ಈಗಿನ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಕ್ಕರೆಯಲ್ಲಿ ದೇಜಗೌ ಜನಿಸಿದ್ದರು. ‘ದೇಜಗೌ’ ಎಂದೇ ಹೆಸರುವಾಸಿಯಾಗಿದ್ದ ಅವರು ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ್ದರು. ಪದ್ಮಶ್ರೀ, ಕರ್ನಾಟಕ ರತ್ನ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ನಾಡೋಜ ಪ್ರಶಸ್ತಿ, 47ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಸೇರಿದಂತೆ ಹಲವು ಗೌರವಗಳಿಗೆ ಅವರು ಪಾತ್ರರಾಗಿದ್ದರು.

ದೇಜಗೌ ನಿಧನದ ಹಿನ್ನೆಲೆಯಲ್ಲಿ ‘ಅವಧಿ ಮ್ಯಾಗ್’ ಪ್ರಕಟಿಸಿದ ವರದಿಯಲ್ಲಿ, ಅವರ ನಡೆದು ಬಂದ ಸಾಹಿತ್ಯ ಹಾದಿಯ ಕುರಿತು ಬೆಳಕು ಚೆಲ್ಲಲಾಗಿದೆ. “ಬಡತನವನ್ನು ಹಾಸಿಹೊದ್ದರೂ ವಿದ್ಯೆಯ ಕಡೆ ಅಪಾರವಾದ ಆಸಕ್ತಿ ಇದ್ದುದರಿಂದ ಶಾಲೆಗೆ ಸೇರಿ, ನಂತರದಲ್ಲಿ ಚನ್ನಪಟ್ಟಣ ಹಾಗೂ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಪಡೆದರು. ರಾಷ್ಟ್ರಕವಿ ಕುವೆಂಪು ಅವರಿಂದ ಪ್ರಭಾವಿತರಾಗಿ,ಮೈಸೂರಿನಲ್ಲಿ ಕನ್ನಡ ಎಂ.ಎ. ಪದವಿ ಪಡೆದರು. 1946ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ, ಕನ್ನಡ ಅಧ್ಯಾಪಕರಾದರು.

ಅನೇಕ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಪ್ರಕಟಣ ವಿಭಾಗದ ಕಾರ್ಯದರ್ಶಿ, ಸಹಾಯಕ ಪ್ರಾಧ್ಯಾಪಕ, ಪರೀಕ್ಷೆಗಳ ನಿಯಂತ್ರಣಾಧಿಕಾರಿ, ಪ್ರಾಧ್ಯಾಪಕರು, ವಿಭಾಗದ ಮುಖ್ಯಸ್ಥರು, ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಮುಂತಾದವು ಅವುಗಳಲ್ಲಿ ಕೆಲವು. 1969ರಲ್ಲಿ ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿ ತಮ್ಮ ಕನ್ನಡಪರವಾದ ರಚನಾತ್ಮಕ ಚಟುವಟಿಕೆಗಳನ್ನು ಆರು ವರ್ಷಗಳ ಕಾಲ ಮುಂದುವರೆಸಿದರು. (1975) ದೇ. ಜವರೇಗೌಡ ಅವರು ಕನ್ನಡದ ಆಧುನಿಕ ಸಂಸ್ಕೃತಿಯನ್ನು ಕಟ್ಟಿದವರಲ್ಲಿ ಒಬ್ಬರು. ಸರಿಸುಮಾರು ಏಳು ದಶಕಗಳಿಂದ ವಿದ್ವತ್ತು, ಆಡಳಿತ ಮತ್ತು ಚಳುವಳಿಗಳೆಂಬ -ಮೂರು ನೆಲೆಗಳಲ್ಲಿ ಮಾಡಿರುವ ಕೆಲಸಗಳು ಅವರ ಕೊಡುಗೆಯ ಸ್ವರೂಪವನ್ನು ನಿರ್ಧರಿಸಿವೆ. ಜಾನಪದ, ಗ್ರಂಥ ಸಂಪಾದನೆ, ಸಾಹಿತ್ಯವಿಮರ್ಶೆ, ಭಾಷಾಂತರ, ಜೀವನಚರಿತ್ರೆ, ಪ್ರವಾಸ ಸಾಹಿತ್ಯ ಮುಂತಾದ ಹಲವು ಕ್ಷೇತ್ರಗಳಲ್ಲಿ ವ್ಯಾಪಕವಾದ ಕೆಲಸ ಮಾಡಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗಳಿಗಾಗಿ ಹತ್ತಾರು ಮಹತ್ವದ ಯೋಜನೆಗಳನ್ನು ರೂಪಿಸಿದ, ಸಂಪನ್ಮೂಲಗಳನ್ನು ಸೃಷ್ಟಿಸಿ, ಅವನ್ನು ಯಶಸ್ವಿಯಾಗಿ ನಿರ್ವಹಿಸಿದ ದೇಜಗೌರ ಸಾಧನೆ ಅನುಪಮವಾದುದು.

ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಮತ್ತು ಮೈಸೂರು ವಿಶ್ವವಿದ್ಯಾಲಯದಲ್ಲಿ, ಅವರು ಕನ್ನಡದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕೆಲಸಗಳನ್ನು ಮಾಡಿದ್ದಾರೆ, ನಿವೃತ್ತಿಯ ನಂತರವೂ ಅಂತಹುದೇ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ದೇಜಗೌ ಅವರು ಪ್ರಾರಂಭಿಸಿದ ಮತ್ತು ಯಶಸ್ವಿಯಾಗಿ ನಿರ್ವಹಿಸಿದ ‘ಕನ್ನಡ ವಿಶ್ವಕೋಶ’, ‘ವಿಷಯ ವಿಶ್ವಕೋಶ-ಕರ್ನಾಟಕ’, ‘ಇಂಗ್ಲಿಷ್-ಕನ್ನಡ ನಿಘಂಟು’, ‘ಸಮಗ್ರ ಕನ್ನಡ ಸಾಹಿತ್ಯಚರಿತ್ರೆ ‘, ‘ಕನ್ನಡ ಛಂದಸ್ಸಿನ ಇತಿಹಾಸ’ ಮುಂತಾದ ಕೆಲವು ಮುಖ್ಯವಾದ ಯೋಜನೆಗಳನ್ನು ಇಲ್ಲಿ ಹೆಸರಿಸಬಹುದು. ಕರ್ನಾಟಕಲ್ಲೇ ಮೊದಲಬಾರಿಗೆ ‘ಜಾನಪದ ವಸ್ತುಸಂಗ್ರಹಾಲ’ಯವನ್ನು ಸ್ಥಾಪಿ¹ ಜಾನಪದ ಅಧ್ಯಯನಕ್ಕೆ ತಳಹದಿಯನ್ನು ರೂಪಿಸಿಕೊಟ್ಟಿದ್ದು ಅವರ ಮುಖ್ಯವಾದ ಸಾಧನೆಗಳಲ್ಲಿ ಒಂದು. ಅವರು ವಿಶ್ವವಿದ್ಯಾಲಯದಲ್ಲಿ ಅನೇಕ ಹೊಸ ವಿಭಾಗಗಳನ್ನು ಪ್ರಾರಂಭಿಸಿದರು. ಈಗಲೂ ‘ಕುವೆಂಪು ವಿದ್ಯಾವರ್ಧಕ ಟ್ರಸ್ಟ್’ ಮೂಲಕ ಕನ್ನಡಪರವಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಜವರೇಗೌಡರು, ವಿವಿಧ ಪ್ರಕಾರಗಳಲ್ಲಿ 135 ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ನೂರಾರು ಲೇಖನಗಳನ್ನು ಪ್ರಕಟಿಸಿದ್ದಾರೆ.”

ಗಣ್ಯರ ನಮನ: 

ಹಿರಿಯ ಸಾಹಿತಿಯ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮತ್ತಿತರರು ಕಂಬಿನಿ ಮಿಡಿದಿದ್ದಾರೆ.

ENTER YOUR E-MAIL

Name
Email *
February 2017
M T W T F S S
« Jan    
 12345
6789101112
13141516171819
20212223242526
2728  

Top