An unconventional News Portal.

ನ್ಯಾಯ
  ...

  ವಿಜಯಪುರ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

  ವಿಜಯಪುರ ಜಿಲ್ಲೆಯ ದಲಿತ ಬಾಲಕಿ ದಾನಮ್ಮಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ದಾನಮ್ಮಳ ಸಾವಿಗೆ ನ್ಯಾಯ ದೊರೆಯಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಜನ ತಮ್ಮ ಆತಂಕ ಮತ್ತು ಆಕ್ರೋಶವನ್ನು ಹೊರಹಾಕುತ್ತಿದ್ದಾರೆ. ದಲಿತ ಸಂಘಟನೆಗಳು, ಮಹಿಳಾ ಹೋರಾಟಗಾರರು ಮತ್ತು ಅನೇಕ ಸಂಘಟನೆಗಳು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿವೆ. ದಾನಮ್ಮ ‘ಕರ್ನಾಟಕದ ನಿರ್ಭಯಾ’ ಎಂದೇ ಕೆಲವರು ಹೇಳುತ್ತಿದ್ದಾರೆ. ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಸಾರ್ವಜನಿಕರ […]

  December 21, 2017
  ...

  ಕರಿ ಕೋಟಿಗೆ ಕಾರುಣ್ಯ ತುಂಬಿದ ಕಪಿಲಾ ಹಿಂಗೊರಾನಿ: ದೇಶ ಕಂಡ ಅಪರೂಪದ ವಕೀಲೆಯ ಪರಿಚಯ

  ಪುಷ್ಪಾ ಕಪಿಲಾ ಹಿಂಗೊರಾನಿ… ದೇಶ ಕಂಡ ಅಪರೂಪದ ವಕೀಲೆ. ಅವರ ಭಾವಚಿತ್ರವೊಂದನ್ನು ಸುಪ್ರಿಂ ಕೋರ್ಟ್‌ನ ಗ್ರಂಥಾಲಯದಲ್ಲಿ ಮಂಗಳವಾರ ಅನಾವರಣಗೊಳಿಸಲಾಯಿತು. ಇದು ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲಿ ವಕೀಲೆಯೊಬ್ಬರಿಗೆ ಸಿಕ್ಕಿರುವ ಅಪರೂಪದ ಹಾಗೂ ಅನನ್ಯ ಗೌರವ. ಇಷ್ಟಕ್ಕೂ ಹಿಂಗೊರಾನಿ ಯಾರು? ಅವರ ಹಿನ್ನೆಲೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (Mother of Public Interest Litigation)ಗಳ ತಾಯಿ ಎಂದೇ ಕರೆಯಲ್ಪಡುವ ಪುಷ್ಪಾ ಕಪಿಲಾ ಹಿಂಗೊರಾನಿ ನೊಂದ ಕೈದಿಗಳ ಕಣ್ಣೀರೊರೆಸಿದ ಮಹಾತಾಯಿ. ವಕೀಲೆಯಾಗಿ ಸುಮಾರು 50 ವರ್ಷಗಳ […]

  December 6, 2017
  ...

  ‘ಹತ್ಯೆಯಾದ ಯುವತಿಯ ಚಾರಿತ್ರ್ಯ ಹರಣ’: ಪಾತಕ ಕಾರ್ಯಕ್ರಮಗಳ ನಿರ್ಮಾಪಕರಿಗೆ ಒಂದು ಪತ್ರ!

  ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಬೆಳಂಬೆಳಗ್ಗೆಯೇ ಯುವತಿಯೊಬ್ಬಳ ಹತ್ಯೆ ನಡೆಯಿತು. ಅದಾದ ಎರಡು ಗಂಟೆಗಳ ಅಂತರದಲ್ಲಿ ಪೊಲೀಸರು, “ಕೊಲೆಗೀಡಾದ ಶೋಭಾಗೆ ಇನ್ನೊಬ್ಬ ವ್ಯಕ್ತಿಯ ಜತೆ ಸಂಬಂಧ ಇತ್ತು. ಆಕೆ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಕೊಲೆ ನಡೆಯಿತು,” ಎಂದು ಹೇಳಿಕೆ ನೀಡಿದರು. ರಾಜಧಾನಿ ಬೆಂಗಳೂರಿನಲ್ಲಿ ನಡೆದ ಯುವತಿಯ ಹತ್ಯೆ ಎಂಬ ಕಾರಣಕ್ಕೆ ಸುದ್ದಿ ವಾಹಿನಿಗಳಲ್ಲಿ ಆ ಸುದ್ದಿ ಪ್ರಾಮುಖ್ಯತೆ ಪಡೆದುಕೊಂಡಿತು. ಗಂಟೆ ಗಟ್ಟಲೆ ಕ್ರೈಂ ಎಪಿಸೋಡ್ ಪ್ರಸಾರವಾದವು. ಇದು ಕನ್ನಡದ ಅಷ್ಟೂ ಸುದ್ದಿವಾಹಿನಿಗಳಲ್ಲಿ ದಿನಕ್ಕೆ ಅರ್ಧ ಗಂಟೆ ಲೆಕ್ಕದಲ್ಲಿ ಪ್ರಸಾರವಾಗುವ ‘ಅಪರಾಧ […]

  April 21, 2017

Top