An unconventional News Portal.

ಪ್ರಶ್ನೆ ಪತ್ರಿಕೆ ಸೋರಿಕೆ
    ...

    ‘ಜುಗಾರಿ ಕ್ರಾಸ್’ಗೆ ಬಂದು ನಿಂತ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಯಾರು ಆ ‘ಬಾಸ್’?

    ವಿಧಾನಸೌಧದಿಂದ ಅನತಿ ದೂರದಲ್ಲಿರುವ ಸಿಐಡಿಯ ಬಿಳಿ ಬಣ್ಣದ ಭವ್ಯ ಕಟ್ಟಡದೊಳಗೆ ದೊಡ್ಡ ಮಟ್ಟದ ಸಂಚಲನ ಶುರುವಾಗಿದೆ. ಪಿಯುಸಿ ‘ರಸಾಯನ ಶಾಸ್ತ್ರ’ದ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ತನಿಖೆ ನಡೆಸುತ್ತಿರುವ ಸಿಐಡಿ ತಂಡಕ್ಕೆ ಮಹತ್ವದ ಸುಳಿವು ಲಭ್ಯವಾಗಿದೆ. ಅದು ‘ಬಾಸ್’ ಅಲಿಯಾಸ್ ‘ಚೀಫ್’ ಎಂಬ ಅನಾಮಧೇಯ ವ್ಯಕ್ತಿಯ ಬಗೆಗಿನ ಸ್ಫೋಟಕ ಮಾಹಿತಿ. ಈ ಬಾರಿ ಇದು, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ‘ಶಿವಕುಮಾರ್  ಎಂಬ ಕಿಂಗ್ ಪಿನ್’ಗೆ ಮಾತ್ರವೇ ಸೀಮಿತಗೊಳ್ಳುವ ‘ಹಗರಣ’ ಇದಲ್ಲ ಎಂಬುದು ತನಿಖೆಯನ್ನು ಮುನ್ನಡೆಸುತ್ತಿರುವ ಹಿರಿಯ ಅಧಿಕಾರಿಗಳಿಗೆ ಮನವರಿಕೆ ಆದಂತಿದೆ. ಆದರೂ, […]

    April 6, 2016
    ...

    ಮನೆ ಪಾಠದ ಉಪನ್ಯಾಸಕರ ವಿರುದ್ಧ ಕ್ರಮಕ್ಕೆ ಸೂಚನೆ

    ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಬುಧವಾರ ಇನ್ನಿಬ್ಬರನ್ನು ಬಂಧಿಸಿದೆ. ಸದಾಶಿವ ನಗರದ ಪೂರ್ಣಪ್ರಜ್ಞಾ ಕಾಲೇಜಿನ ದೈಹಿಕ ಶಿಕ್ಷಕ ಅನಿಲ್, ಮತ್ತಿಕೆರೆ ಸರಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಸತೀಶ್ ಬಂಧಿತರು. ಇವರಿಬ್ಬರು, ಪ್ರಶ್ನೆ ಪತ್ರಿಕೆಗಳ ಮಾರಾಟ ಜಾಲದಲ್ಲಿ ಭಾಗಿಯಾಗಿದ್ದರು. ಇದರಿಂದ ಕಮಿಷನ್ ಪಡೆಯುತ್ತಿದ್ದರು ಎಂದು ಸಿಐಡಿ ಡಿಐಜಿ ಸೋನಿಯಾ ನಾರಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ಸೋರಿಕೆಯಾದ ಪಿಯುಸಿ ರಸಾಯನ ಶಾಸ್ತ್ರ ವಿಭಾಗದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಈವರೆಗೆ ಐವರ ಬಂಧನವಾದಂತಾಗಿದೆ. ಮನೆಪಾಠಕ್ಕೆ […]

    April 6, 2016
    ...

    ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಚಿವರ ಆಪ್ತ ಸೇರಿ ಮೂವರ ಬಂಧನ

    ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರರಕಣದಲ್ಲಿ ಸಚಿವರ ಆಪ್ತ ಸಹಾಯಕ ಸೇರಿದಂತೆ ಸೋಮವಾರ ಮೂವರ ಬಂಧನವಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಡಿಐಜಿ ಸೋನಿಯಾ ನಾರಂಗ್ ಈ ಸಂಬಂಧ ಮಧ್ಯಾಹ್ನದ ವೇಳೆಗೆ ಮಾಹಿತಿ ಹೊರಗೆಡವಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಶರಣ್ ಪ್ರಕಾಶ್ ಪಾಟೀಲ್ ಜತೆ ವಿಶೇಷಾಧಿಕಾರಿಯಾಗಿದ್ದ ಓಬಳರಾಜು ಎಂಬಾತನನ್ನು ಬಂಧಿಸಲಾಗಿದೆ.  ವಿಜಯ ನಗರದ ಕೇಂಬ್ರಿಡ್ಜ್ ಕಾಲೇಜಿನಲ್ಲಿ ದೈಹಿಕ ಶಿಕ್ಷಕ ಮಂಜುನಾಥ್ ಹಾಗೂ ಲೋಕೋಪಯೋಗಿ ಇಲಾಖೆ ಕಚೇರಿ ನಿರ್ವಾಹಕ ರುದ್ರಪ್ಪ ಉಳಿದ ಬಂಧಿತರು. ಶಿಕ್ಷನ ಮಂಜುನಾಥ್ ಮತ್ತೊಬ್ಬ ಆರೋಪಿಯಿಂದ ಪ್ರಶ್ನೆ ಪತ್ರಿಕೆ […]

    April 4, 2016
    ...

    ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಬೇಟೆ ಆರಂಭಿಸಿದ ಸಿಐಡಿ

    ಪಿಯುಸಿ ರಸಾಯನಶಾಸ್ತ್ರ ಪಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯಲ್ಲಿ ಕೊನೆಗೂ ಸಿಐಡಿ ಪೊಲೀಸರು ಬೇಟೆ ಆರಂಭಿಸಿದ್ದಾರೆ. ‘ಶಿಕ್ಷಣ ಕ್ಷೇತ್ರದ ಮಾಫಿಯಾಗಳ ತವರುಮನೆ’, ಬೆಂಗಳೂರಿನ ರಾಜಾಜಿನಗರದಿಂದ ಇಬ್ಬರು ಉಪನ್ಯಾಸಕರು ಹಾಗೂ ಓಬಳೇಶ್ ಎಂಬಾತನನ್ನು ಶುಕ್ರವಾರ ರಾತ್ರಿ 10. 30ರ ಸುಮಾರಿಗೆ ವಿಚಾರಣೆಗಾಗಿ ಕರೆತಂದಿದ್ದಾರೆ. ಸಿಐಡಿ ಗುರುತಿಸಿರುವ ಆರೋಪಿ ಕಿರಣ್ ಸಹಚರ ಎನ್ನಲಾಗುತ್ತಿರುವ ಓಬಳೇಶ್ ಎಂಬಾತನ್ನು ಸಿಐಡಿ ಕೇಂದ್ರ ಕಚೇರಿಯಲ್ಲಿ ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ. ಮುಂದುವರಿದ ವಿಚಾರಣೆ: ರಾಜಾಜಿನಗರದ ಕಿರಣ್ ಎಂಬಾತ ಹಿಂದಿನಿಂದಲೂ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡುವ ದಂಧೆ ನಡೆಸುತ್ತಿದ್ದ […]

    April 1, 2016
    ...

    ಮತ್ತೆ ಮಿಸ್ ಹೊಡೆದ ಪಿಯು ಬೋರ್ಡ್ ‘ಕೆಮಿಸ್ಟ್ರಿ’; ಪರೀಕ್ಷೆಗೆ ಮುನ್ನವೇ ಪ್ರಶ್ನೆ ಪತ್ರಿಕೆ ಬಹಿರಂಗ

    ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಗುರುವಾರ ಮತ್ತೊಮ್ಮೆ ಸೋರಿಕೆಯಾಗುವ ಮೂಲಕ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಮಾ. 21ರಂದು ನಡೆಯಬೇಕಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಪಿಯು ಮಂಡಳಿ ಮರು ಪರೀಕ್ಷೆಯನ್ನು ಮಾ. 30ಕ್ಕೆ ಮುಂದೂಡಿತ್ತು. ರಾಜ್ಯಾದ್ಯಂತ ಸುಮಾರು 1. 45 ಲಕ್ಷ ವಿದ್ಯಾರ್ಥಿಗಳು ರಸಾಯನ ಶಾಸ್ತ್ರ ಪರೀಕ್ಷೆಯನ್ನು ತೆಗೆದುಕೊಂಡಿದ್ದರು. ಪರೀಕ್ಷೆ ಆರಂಭಕ್ಕೂ ಮುನ್ನವೇ ಮಧ್ಯರಾತ್ರಿ ಮೂರು ಗಂಟೆ ವೇಳೆಗೆ ಬೆಂಗಳೂರು, ತುಮಕೂರುಗಳಲ್ಲಿ ಕೈ ಬರಹದಲ್ಲಿ ಬರೆದ ಪ್ರಶ್ನೆ ಪತ್ರಿಕೆ ಹರಿದಾಡಲಾರಂಭಿಸಿತು. ಬೆಳಗೆ ನಸಕು ಹರಿಯುವ […]

    March 31, 2016
  • 1
  • 2

Top