An unconventional News Portal.

ಸಾರ್ವಜನಿಕ ಹಿತಾಸಕ್ತಿ ಅರ್ಜಿ
  ...

  ‘ಮತ ಹಾಕುವ ಮುನ್ನ…’: ಪಿಐಎಲ್‌ ವಿಷಯ; ಪ್ರಜಾಪ್ರತಿನಿಧಿ ಕಾಯ್ದೆಯ ಪರಿಚಯ

  ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗದ ವ್ಯಕ್ತಿ ರಾಜಕೀಯ ಪಕ್ಷವೊಂದರ ಅಧ್ಯಕ್ಷ ಅಥವಾ ಆ ಪಕ್ಷದ ಪ್ರಮುಖ ಹುದ್ದೆಯಲ್ಲಿದ್ದುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಎಷ್ಟು ಸರಿ? ಎಂಬ ಚರ್ಚೆಯನ್ನು ಸುಪ್ರೀಂಕೋರ್ಟ್‌ನ ಸೋಮವಾರದ ಕಲಾಪ ಮುನ್ನೆಲೆಗೆ ತಂದಿದೆ. “ಅಪರಾಧ ಹಿನ್ನೆಲೆಯ ವ್ಯಕ್ತಿ ರಾಜಕೀಯ ಪಕ್ಷದ ಅಧ್ಯಕ್ಷನಾಗಲು ಹೇಗೆ ಸಾಧ್ಯ?” ಎಂದು ಸುಪ್ರೀಂಕೋರ್ಟ್‌ ಪ್ರಶ್ನಿಸಿದೆ. ಪ್ರಜಾಪ್ರತಿನಿಧಿ ಕಾಯ್ದೆಯ ನಿಯಮಗಳಡಿ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗದ ವ್ಯಕ್ತಿಗಳು ಪರೋಕ್ಷವಾಗಿ ಚುನಾವಣಾ ವ್ಯವಸ್ಥೆಯಲ್ಲಿ ಭಾಗಿಯಾಗುವ ಹಿಂದಿನ ತರ್ಕ ಎಂಥದ್ದು ಎಂಬ ಪ್ರಶ್ನೆಯನ್ನು ನ್ಯಾಯಾಲಯ ಎತ್ತಿದೆ. ಈ ಹಿನ್ನೆಲೆಯಲ್ಲಿ […]

  February 13, 2018
  ...

  ಸುಪ್ರಿಂ ಕೋರ್ಟ್ ಮೌಖಿಕ ಪ್ರಶ್ನೆ: ಅಪರಾಧ ಹಿನ್ನೆಲೆಯ ವ್ಯಕ್ತಿ ರಾಜಕೀಯ ಪಕ್ಷದ ಅಧ್ಯಕ್ಷನಾಗಲು ಹೇಗೆ ಸಾಧ್ಯ?

  “ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ಮತ್ತು ಭ್ರಷ್ಟಾಚಾರದಲ್ಲಿ ಭಾಗಿಯಾದ ವ್ಯಕ್ತಿ ರಾಜಕೀಯ ಪಕ್ಷವೊಂದರ ಅಧ್ಯಕ್ಷರಾಗಲು ಹೇಗೆ ಸಾಧ್ಯ?” ಎಂದು ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ದೀಪಕ್‌ ಮಿಶ್ರಾ ಪ್ರಶ್ನಿಸಿದ್ದಾರೆ. ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ತ್ರಿಸದಸ್ಯ ಪೀಠ, ರಾಜಕೀಯ ಪಕ್ಷಗಳ ಈ ವ್ಯವಸ್ಥೆಯನ್ನು ಸುಧಾರಿಸಲು ಕೇಂದ್ರ ಸರಕಾರ ಮತ್ತು ಚುನಾವಣಾ ಆಯೋಗ ಮುಂದಾಗಬೇಕು ಎಂದು ಸೋಮವಾರ ಮೌಖಿಕವಾಗಿ ತಿಳಿಸಿದೆ. “ಅಪರಾಧ ಹಿನ್ನೆಲೆಯ ವ್ಯಕ್ತಿ ರಾಜಕೀಯ ಪಕ್ಷವೊಂದರ ಮುಖ್ಯಸ್ಥನಾಗಿದ್ದುಕೊಂಡು ಚುನಾವಣೆಯಲ್ಲಿ ಯಾವ ಅಭ್ಯರ್ಥಿ ಸ್ಪರ್ಧಿಸಬೇಕೆಂಬುದನ್ನು […]

  February 12, 2018
  ...

  ಖಾಕಿ, ಕಾವಿ ನಡುವೆ ಸಂಘರ್ಷ: ಪೊಲೀಸ್ ವರಿಷ್ಠಾಧಿಕಾರಿಗೇ ಗುಂಡಿಕ್ಕಿದ ‘ಸತ್ಯಾಗ್ರಹಿ’ಗಳು!

  ಕಾನೂನು ಬಾಹಿರವಾಗಿ ವಾಸಿಸುತ್ತಿದ್ದ ಜನರನ್ನು ಒಕ್ಕಲೆಬ್ಬಿಸಲು ಹೋದ ಸಮಯದಲ್ಲಿ ನಡೆದ ಘರ್ಷಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇಬ್ಬರು ಪೊಲೀಸರು ಹಾಗೂ 12 ಜನ ಪ್ರತಿಭಟನಾಕಾರರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಅಲಹಾಬಾದ್ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಇಲ್ಲಿನ ಜವಹರ್ ಬಾಗ್ ಏರಿಯಾದ ಉದ್ಯಾನವನದಲ್ಲಿ ವಾಸುತ್ತಿದ್ದ ಜನರನ್ನು ಒಕ್ಕಲೆಬ್ಬಿಸಲು ಪೊಲೀಸರ ತುಕಡಿಯೊಂದು ತೆರಳಿತ್ತು. ಕಾನೂನು ಬಾಹಿರವಾಗಿ ಠಿಕಾಣಿ ಹೂಡಿದ್ದ ‘ಆಝಾದ್ ಭಾರತ್ ವೈದಿಕ್ ವೈಚಾರಿಕ್ ಕ್ರಾಂತಿ ಸತ್ಯಾಗ್ರಹ’ ಹೆಸರಿನ ಧಾರ್ಮಿಕ ಗುಂಪಿನ ಸದಸ್ಯರು ಹಾಗೂ […]

  June 3, 2016

Top